Bengaluru 27°C
Ad

ಬಿಹಾರ: ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

Bihar

ಶೇಖ್‌ಪುರ: ಬಿಸಿಲಿನ ಶಾಖಕ್ಕೆ ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಮೂರ್ಛೆ ಹೋಗಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದನ್ನು ಎಎನ್​​ಐ ಹಂಚಿಕೊಂಡಿದೆ.

Ad

ಉತ್ತರ ಭಾರತದಲ್ಲಿ ಬಿಸಿಲು ಹೆಚ್ಚಾಗಿದ್ದು, ಇಂತಹ ಘಟನೆಗಳು ನಡೆಯುತ್ತಿದೆ. ಶೇಖ್‌ಪುರದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಈ ವಿಡಿಯೋದಲ್ಲಿ ವಿದ್ಯಾರ್ಥಿಗಳು ಬಿಸಿಲಿನಿಂದ ತುಂಬಾ ದಣಿದಿರುವುದನ್ನು ಕಾಣಬಹುದು. ವಿದ್ಯಾರ್ಥಿಗಳಿಗೆ ನೀರು ಕೊಟ್ಟು ಶಿಕ್ಷಕರು ಸಮಾಧಾನ ಮಾಡುತ್ತಿದ್ದಾರೆ.

Ad

ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆ ಸಾಗಿಸಲಾಗಿದ್ದು, ಸಲೈನ್ ಚುಚ್ಚುಮದ್ದನ್ನು ನೀಡಲಾಗಿದೆ. ಇನ್ನು ಆಸ್ಪತ್ರೆಯ ಅಧಿಕಾರಿಗಳು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಮಕ್ಕಳಿಗೆ ಪೋಷಕರು ಆಸ್ಪತ್ರೆಯಲ್ಲಿ ನೀರು ಹಾಗೂ ORS ನೀಡುತ್ತಿದ್ದಾರೆ. ವೈದ್ಯರು ಕೂಡ ಈ ಬಗ್ಗೆ ಸಲಹೆಯನ್ನು ನೀಡಿದ್ದಾರೆ.

Ad

ಇನ್ನು ಶೇಖ್‌ಪುರದ ಸದರ್ ಆಸ್ಪತ್ರೆಯ ವೈದ್ಯರಾದ ರಜನಿಕಾಂತ್ ಕುಮಾರ್ ಅವರು ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚುತ್ತಿರುವ ತಾಪಮಾನದಿಂದಾಗಿ ವಿದ್ಯಾರ್ಥಿಗಳು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ. ವಿದ್ಯಾರ್ಥಿಗಳು ಎಲ್ಲಾ ಸಮಯದಲ್ಲೂ ಹೈಡ್ರೇಟೆಡ್ ಆಗಿರಬೇಕು. ಅವರು ಸಾಧ್ಯವಾದಷ್ಟು ನೀರು ಕುಡಿಯಬೇಕು. ಶಾಲೆಗೆ ಹೋಗುವಾಗ ಎಲ್ಲ ವಿದ್ಯಾರ್ಥಿಗಳು ನೀರಿನ ಬಾಟಲಿ ಕೊಂಡೊಯ್ಯಬೇಕು ಎಂದು ವೈದ್ಯರು ಹೇಳಿದ್ದಾರೆ.

Ad

 

 

 

Ad
Ad
Nk Channel Final 21 09 2023