Bengaluru 22°C
Ad

ತಮಿಳುನಾಡು ನಕಲಿ ಕಳ್ಳಬಟ್ಟಿ ಪ್ರಕರಣ : ಮದ್ಯ ಸರಬರಾಜು ಮಾಡಿದ ವ್ಯಕ್ತಿ ಬಂಧನ

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿಷಯುಕ್ತ ಮದ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿಷಯುಕ್ತ ಮದ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವಿಷಕಾರಿ ಮಧ್ಯ ಸೇವಿಸಿದ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ ಕೆಲವರ ಸ್ಥಿತಿ ಗಂಭೀರಗೊಂಡಿದ್ದು, ದಿನದಿನಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.

ನಿನ್ನೆ ಸಂಜೆಯವರೆಗೂ 29 ಸಂತ್ರಸ್ತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಅವರ ಅಂತ್ಯಕ್ರಿಯೆ ಮಾಡಲಾಯಿತು ಎಂದು ಜಿಲ್ಲಾಧಿಕಾರಿ ಎಂ.ಎಸ್. ಪ್ರಶಾಂತ್ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಮೂವರು ಪುರುಷರು ಚೇತರಿಸಿಕೊಂಡಿದ್ದಾರೆ. ಆದರೆ ಡಜನ್​ಗಟ್ಟಲೆ ಇತರರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.

Ad
Ad
Nk Channel Final 21 09 2023
Ad