Bengaluru 22°C
Ad

ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕಾರ : ವಿಡಿಯೋ ವೈರಲ್‌

ಅತ್ಯಂತ ಕಿರಿಯ ಸಂಸದೆ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ : ಅತ್ಯಂತ ಕಿರಿಯ ಸಂಸದೆ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಎಲ್ಲರೂ ಸಂಸದೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕ ಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಅಭ್ಯರ್ಥಿಯಾಗಿ ಬಿಹಾರದ ಸಮಸ್ತಿಪುರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸನ್ನಿ ಹಜಾರಿ ಅವರನ್ನು 1,87,251 ಮತಗಳಿಂದ ಸೋಲಿಸಿದ್ದಾರೆ. ಆ ಮೂಲಕ ಇವರು ಸಮಸ್ತಿಪುರದ ಮೊದಲ ಮಹಿಳಾ ಸಂಸದೆ ಎನಿಸಿಕೊಂಡಿದ್ದಾರೆ.

ಶಾಂಭವಿ ಚೌಧರಿ ಅವರು ಜೆಡಿಯು ನಾಯಕರಾದ ಅಶೋಕ್ ಚೌಧರಿ ಅವರ ಪುತ್ರಿ. ಅಶೋಕ್ ಚೌಧರಿ ಅವರು ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಅತ್ಯಂತ ಪ್ರಭಾವಶಾಲಿ ಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಇವರು ಮೊದಲಿಗೆ ಕಾಂಗ್ರೆಸ್ ನಲ್ಲಿದ್ದು ನಂತರ ಜೆಡಿಯು ಪಕ್ಷಕ್ಕೆ ಸೇರಿಕೊಂಡರು. ಅಲ್ಲದೇ ಶಾಂಭವಿ ಚೌಧರಿ ಅವರ ಅಜ್ಜ ದಿ.ಮಹಾವೀರ್ ಚೌಧರಿ ಕೂಡ ಕಾಂಗ್ರೆಸ್ ಸದಸ್ಯರಾಗಿದ್ದರು. ಅವರು ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಹಾಗಾಗಿ ಮೂರನೇ ತಲೆಮಾರಿನ ರಾಜಕಾರಣಿಯಾದ ಶಾಂಭವಿ ಅವರಿಗೆ ರಾಜಕೀಯ ವಿಚರದಲ್ಲಿ ಆಸಕ್ತಿ ಇತ್ತು ಎನ್ನಲಾಗಿದೆ. ಶಾಂಭವಿ ಅವರು ಪ್ರತಿಷ್ಠಿತ ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ‘ಮಾಸ್ಟರ್ಸ್ ಆಫ್ ಆರ್ಟ್ಸ್’ ಪದವಿ ಪಡೆದಿದ್ದಾರೆ.

https://x.com/TheSootr/status/1805250260756783275

Ad
Ad
Nk Channel Final 21 09 2023
Ad