Ad

ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ: ವಿಡಿಯೋ ವೈರಲ್‌

ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ನಡೆದಿದೆ.

ನೋಯ್ಡಾ : ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ನಡೆದಿದೆ.

Ad
300x250 2

ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಾಗ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.

ವರದಿಗಳ ಪ್ರಕಾರ, ಗಾಯಗೊಂಡ ಬಾಲಕಿಯನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ವಿಡಿಯೋದಲ್ಲಿ ಕಂಡುಬರುವ ಮಹಿಳೆಯನ್ನು ರಿಂಕಿ ಎಂದು ಗುರುತಿಸಲಾಗಿದ್ದು, ಅವರು ಕನೌಜಿಯಾ ಎಂಬ ವ್ಯಕ್ತಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಸೆಕ್ಟರ್ -63 ಠಾಣೆಯ ಪೊಲೀಸರು ಸೋಶಿಯಲ್ ಮೀಡಿಯಾಗಳ ಮೂಲಕ ಮಾಹಿತಿ ಪಡೆದರು. ಘಟನೆಯ ಬಗ್ಗೆ ತಕ್ಷಣ ಗಮನ ಹರಿಸಿದ ಪೊಲೀಸರು ಗಂಭೀರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವಾಹನವನ್ನು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.

https://x.com/sirajnoorani/status/1806922717725086181?

Ad
Ad
Nk Channel Final 21 09 2023
Ad