ಉತ್ತರಾಖಂಡ: ದಿನೇಶ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹೆಚ್ಚು ವೈರಲ್ ಆಗುತ್ತಿದೆ. ಟೆರೇಸ್ ಮತ್ತು ಮನೆಯ ಹೊರಗೆ ಒಣಗಲು ಹಾಕಿದ್ದ ಮಹಿಳೆಯರ ಒಳಉಡುಪುಗಳನ್ನು ಕದ್ದು, ಅದನ್ನು ಕೊಳಕು ಮಾಡಿ ಎಸೆಯುತ್ತಿರುವ ಯುವಕನೊಬ್ಬನ ಕೃತ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವಕನನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.
ಈ ರೀತಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವ್ಯಕ್ತಿಗೆ ಮಾನಸಿಕ ಆರೋಗ್ಯ ಚೆನ್ನಾಗಿಲ್ಲ ಎನ್ನಲಾಗುತ್ತಿದೆ. ಪ್ರತಿದಿನ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ ಎಂದು ಉಧಮ್ ಸಿಂಗ್ ನಗರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದಿನೇಶಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

