ಎಲ್ಲೆಡೆ ಭಾರೀ ಮಳೆಯಾಗಿದ್ದು, ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ.

ವೈರಲ್ ವಿಡಿಯೋದಲ್ಲಿ, ಪ್ರಯಾಣಿಕರು ಛತ್ರಿ ಹಿಡಿದು ರೈಲು ಕೋಚ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ಎಲ್ಲರೂ ಒಂದೇ ಸೂರಿನಡಿ ನಿಂತಿರುವುದು ಕಂಡು ಬಂದಿದೆ. ರೈಲಿನ ಛಾವಣಿಯಿಂದ ನೀರು ಜಿನುಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿವೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ಹಳೆಯದು ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. @INCKerala ಟ್ವಿಟರ್​​ ಖಾತೆಯಲ್ಲಿ ಜೂನ್​​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ.