ನವದೆಹಲಿ: ನಕಲಿ ಆಧಾರ್ ಕಾರ್ಡ್​  ತೋರಿಸಿ ಸಂಸತ್ ಭವನ  ಪ್ರವೇಶಿಸಲು ಮೂವರು ಯತ್ನಿಸಿದ ಘಟನೆ ಜೂನ್ 4ರಂದು ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ  ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 19/465/468/471/120B ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪಾರ್ಲಿಮೆಂಟ್ ಕಾಂಪ್ಲೆಕ್ಸ್ ಪ್ರವೇಶಿಸಲು ಪ್ರಯತ್ನಿಸಿದ ಮೂವರು ಕಾರ್ಮಿಕರನ್ನು ನಿರ್ಮಾಣ ಕಂಪನಿ ಡೀ ವೀ ಪ್ರಾಜೆಕ್ಟ್ಸ್ ಲಿಮಿಟೆಡ್ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ಎಂಪಿ ಲಾಂಜ್‌ನಲ್ಲಿ ನಿರ್ಮಾಣ ಕಾರ್ಯ ಮಾಡಲು ಮೂವರು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು.

ಎಫ್‌ಐಆರ್‌ ಪ್ರಕಾರ, ಜೂನ್‌ 4ರಂದು ಮಧ್ಯಾಹ್ನ 1.30ಕ್ಕೆ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ, ಹೊಸ ಸಂಸತ್ ಭವನದ ಭದ್ರತೆಯ ಜವಾಬ್ದಾರಿಯನ್ನು ದೆಹಲಿ ಪೊಲೀಸರಿಗೆ ವಹಿಸಲಾಗಿತ್ತು. ಆದರೆ ಇತ್ತೀಚೆಗೆ ಅದರ ಭದ್ರತೆಯ ಜವಾಬ್ದಾರಿಯನ್ನು ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಗಿದೆ.