ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್ ಡೆತ್ನೋಟ್ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ತೆಗೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದಾರೆ.
ಸಾಯಿತೇಜ್ನನ್ನು ಎಸ್ಐಟಿ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.ಸಾಯಿತೇಜ್ ಬಂಧನದಿಂದ ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆಯಿದೆ. ತನ್ಮೂಲಕ ಪ್ರಕರಣಕ್ಕೆ ಪ್ರಮುಖ ತಿರುವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

