Ad

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣ : ಮತ್ತೋರ್ವ ಆರೋಪಿಯ ಬಂಧನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್​ ಡೆತ್​​ನೋಟ್​​​ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ತೆಗೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದಾರೆ.

Ad
300x250 2

ಸಾಯಿತೇಜ್​​​ನನ್ನು ಎಸ್‌ಐಟಿ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.ಸಾಯಿತೇಜ್​ ಬಂಧನದಿಂದ ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆಯಿದೆ. ತನ್ಮೂಲಕ ಪ್ರಕರಣಕ್ಕೆ ಪ್ರಮುಖ ತಿರುವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

Ad
Ad
Nk Channel Final 21 09 2023
Ad