ನವದೆಹಲಿ: ದೆಹಲಿ- ವಡೋದರಎಕ್ಸ್​ಪ್ರೆಸ್​ವೇಯಲ್ಲಿ ಸಾಗುತ್ತಿದ್ದ ವಾಹನವೊಂದು ಅನಿರೀಕ್ಷಿತವಾಗಿ ಗಾಳಿಯಲ್ಲಿ ಹಾರಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಾಮಗಾರಿ ವೇಳೆ ನಡೆದಿರುವ ಲೋಪದಿಂದ ಈ ರೀತಿ ಆಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಗುತ್ತಿಗೆದಾರನಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಷ್ಟೇ ಅಲ್ಲ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಅಧಿಕಾರಿಗಳನ್ನು ವಜಾಗೊಳಿಸಿದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಹಲವಾರು ಕಾರುಗಳು ಬ್ಯಾರಿಕೇಡ್‌ಗಳನ್ನು ಸಮೀಪಿಸುತ್ತಿದ್ದಂತೆ ಗಾಳಿಯಲ್ಲಿ ಹಾರಿರುವ ವಿಡಿಯೋ ತೋರಿಸಲಾಗಿದೆ. ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಇಲ್ಲದೇ ಇದ್ದರೂ ರಸ್ತೆಯಲ್ಲಿ ಸರಾಗವಾಗಿ ಸಾಗುತ್ತಿರುವ ಪ್ರತಿಯೊಂದು ವಾಹನವೂ ಇಂಡೆಂಟೇಶನ್ ಹೊಡೆಯುವುದು ಕಂಡಿದೆ. ಈ ಸಂದರ್ಭದಲ್ಲಿ ಕಾರುಗಳು ಗಾಳಿಯಲ್ಲಿ ಹಾರಿ ನೆಲದ ಮೇಲೆ ಜಿಗಿತವನ್ನು ನಡೆಸಿವೆ. ಆದರೆ, ಅದೃಷ್ಟವಶಾತ್ ಪಲ್ಟಿಯಾಗುವುದಿಲ್ಲ. ಈ ಹಿನ್ನಲೆ ಗುತ್ತಿಗೆದಾರರಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅಲ್ಲದೇ ಕಳಪೆ ಮೇಲ್ವಿಚಾರಣೆ ಮತ್ತು ಸೇವೆಗಳಲ್ಲಿನ ಲೋಪದ ಕಾರಣದಿಂದ ಪ್ರಾಧಿಕಾರದ ಇಂಜಿನಿಯರ್‌ನ ಟೀಮ್ ಲೀಡರ್ ಕಮ್ ರೆಸಿಡೆಂಟ್ ಇಂಜಿನಿಯರ್ ಅವರನ್ನು ವಜಾಗೊಳಿಸಲಾಗಿದೆ. ಸಂಬಂಧಿಸಿದಂತೆ ಸೈಟ್​ ಇಂಜಿನಿಯರ್​ ಅವರನ್ನು ವಜಾಗೊಳಿಸಲಾಗಿದೆ. ಹಾಗೇ ಪಿಡಿ ಮತ್ತು ಮ್ಯಾನೇಜರ್​ (ಟೆಕ್​)ಗೆ ಕೂಡ ಶೋಕಾಸ್​ ನೋಟಿಸ್​ ಜಾರಿ ಮಾಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಐಐಟಿ ಖರಗ್‌ಪುರ ಪ್ರೊ.ಕೆ.ಎಸ್. ರೆಡ್ಡಿ ಮತ್ತು ಐಐಟಿ ಗಾಂಧಿನಗರ ಪ್ರೊ.ಜಿ.ವಿ. ರಾವ್ ಒಳಗೊಂಡ ತಂಡವನ್ನು ತನಿಖೆಗೆ ರಚಿಸಲಾಗಿದ್ದು, ಇದಕ್ಕೆ ಕಾರಣಗಳು ಮತ್ತು ಪರಿಹಾರ ತಿಳಿಸುವಂತೆ ಸೂಚಿಸಲಾಗಿದೆ.

View this post on Instagram

A post shared by 𝐏𝐥𝐮𝐬 𝐃𝐫𝐢𝐯𝐞 | 𝐃𝐡𝐫𝐮𝐯 𝐂𝐡𝐚𝐮𝐝𝐡𝐚𝐫𝐲 (@plusdrive_155)