Ad

ವಿಡಿಯೋ: ರಿವರ್ಸ್​ ಗೇರ್​ನಲ್ಲಿದ್ದಾಗ ಎಕ್ಸಲೇಟರ್​ ಒತ್ತಿ ಕಂದಕಕ್ಕೆ ಬಿದ್ದ ಕಾರು, ಯುವತಿ ಸಾವು

Car (1)

ಮಹಾರಾಷ್ಟ್ರ: ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್​ ಗೇರ್​ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್​​ ಒತ್ತಿದ ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Ad
300x250 2

ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ಆಕಸ್ಮಿಕವಾಗಿ ರಿವರ್ಸ್​ ಗೇರ್​ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್​ ಬ್ಯಾರಿಯರ್​ ಅನ್ನು ಮುರಿದು ಕಂದಕಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾಳೆ. ಕಾರು ರಿವರ್ಸ್ ಗೇರ್ ನಲ್ಲಿದ್ದಾಗ ಯುವತಿ ಕ್ಲಚ್ ಬದಲು ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ನೇರವಾಗಿ ಕಂದಕಕ್ಕೆ ಬಿದ್ದಿದೆ.

ಸುಲಿಭಂಜನ್ ಪ್ರದೇಶದಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸtrendingಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ವೇತಾಗೆ ಕಾರು ಓಡಿಸುವಾಗ ರೀಲ್‌ಗಳನ್ನು ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್​ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ಥಟ್ಟನೆ ಶ್ವೇತಾಳ ಕಾರು ವೇಗವಾಗಿ ಹಿಂದಕ್ಕೆ ಚಲಿಸತೊಡಗಿತು. ಶಿವರಾಜ್​ ಕ್ಲಚ್ ಕ್ಲಚ್​ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸಲೇ ಇಲ್ಲ, ಅಷ್ಟರಲ್ಲಾಗಲೇ ಕಾರು ಕೆಳಗೆ ಬಿದ್ದಿದೆ. ಕಾರು ಚಾಲನೆ ಮಾಡುವಾಗ ಆಕೆಯ ಸ್ನೇಹಿತ ಶಿವರಾಜ್​ ಎಂಬಾತ ವಿಡಿಯೋ ಮಾಡುತ್ತಿದ್ದ, ಕಾರು ರಿವರ್ಸ್​ ಗೇರ್​ನಲ್ಲಿದ್ದಾಗ ಅಕಸ್ಮಾತ್​ ಆಗಿ ಆಕ್ಸಲರೇಟರ್ ಒತ್ತಿದ್ದರಿಂದ ಈ ಅವಘಡ ಸಂಭವಿಸಿದೆ.  ಘಟನೆಯ ದೃಶ್ಯ ಸ್ನೇಹಿತನ ಮೊಬೈಲ್‌  ಫೋನ್‌ ನಲ್ಲಿ ಸೆರೆಯಾಗಿದೆ.

 

Ad
Ad
Nk Channel Final 21 09 2023
Ad