Showing 20 of 361 posts • Page 10 of 19
ಬೆಂಗಳೂರಿನಲ್ಲಿ ಇತ್ತೀಚೆಗೆ ಮೈಕ್ರೋಸಾಫ್ಟ್ ಟೆಕ್ಕಿಯೊಬ್ಬ ಆಟೋ ಓಡಿಸುವ ಅಚ್ಚರಿಯ ದೃಶ್ಯವೊಂದು ಬೆಳಕಿಗೆ ಬಂದಿದೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ರೀಲ್ಸ್, ವಿಡಿಯೋ ಮೂಲಕವೇ ಹಲವರು ಆದಾಯಗಳಿಸುತ್ತಿದ್ದಾರೆ. ಇನ್ನು ಲೈಕ್ ಮತ್ತು ಕಮೆಂಟ್ಗಳಿಗಾಗಿ ಹರಸಾಹಸ ಮಾಡಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಸ್ವಚ್ಛತಾ ಸಿಬ್ಬಂದಿ ಕಸದಲ್ಲಿ ಸಿಕ್ಕ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಜ್ರದ ಹಾರವನ್ನು ವಾರಸುದಾರರಿಗೆ ವಾಪಸ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.
19 ವರ್ಷದ ಯುವತಿಯೊಬ್ಬಳ ತಲೆ ಹೊಕ್ಕಿದ್ದ 70ಕ್ಕೂ ಹೆಚ್ಚು ಸೂಜಿಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಘಟನೆ ಒಡಿಶಾದಲ್ಲಿ ನಡೆದಿದೆ.
ಛತ್ರಪತಿ ಸಂಭಾಜಿನಗರದಲ್ಲಿರುವ ಜಿಮ್ನಲ್ಲಿ ಜುಂಬಾ ಡ್ಯಾನ್ಸ್ ವರ್ಕೌಟ್ ಮಾಡುತ್ತಿದ್ದ ವೇಳೆ ಉದ್ಯಮಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಭಾರತ ಮೂಲದ ಅಮೆರಿಕನ್ ಮೇಲೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ.
7ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ರೀಲ್ಸ್ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶ ಅಂಬಾದಲ್ಲಿ ನಡೆದಿದೆ.
ಈ ವಾರದ ಆರಂಭದಲ್ಲಿ ಕರ್ನಾಟಕದ ಆಗುಂಬೆಯಲ್ಲಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ವನ್ಯಜೀವಿ ಅಧಿಕಾರಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದರು.
ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ.
ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಅಮುಲ್ ಕಂಪನಿಯ ಹೆಚ್ಚಿನ ಪ್ರೊಟೀನ್ ಮಜ್ಜಿಗೆ ಪ್ಯಾಕ್ನಲ್ಲಿ ಜೀವಂತ ಹುಳುಗಳು ಪತ್ತೆಯಾಗಿವೆ.
ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ರೀಲ್ಸ್ ಪ್ರಿಯರಿಗೆ ಭರ್ಜರಿ ಆಫರ್ ಕೊಟ್ಟಿದೆ. ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ಜಿಲ್ಲೆಯಲ್ಲಿ ಆಶ್ಚರ್ಯ ಪಡುವ ಘಟನೆ ನಡೆದಿದ್ದು ಓರ್ವ ತಾಯಿ 25 ಬೆರಳುಗಳಿರೋ ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ ಕೇಂದ್ರವಾಗಿದೆ.
ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರ್ಯಾಣದ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ನಡೆದಿದೆ.
ಭಾರತದ ಭೂತ್ ಜೋಲೋಕಿಯಾ ಚಿಪ್ಸ್ ತಿಂದ ಜಪಾನ್ನ 14 ಹೈಸ್ಕೂಲ್ ವಿದ್ಯಾರ್ಥಿಗಳು ಹೊಟ್ಟೆ ಉರಿಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
ವೈದ್ಯರೊಬ್ಬರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಮ್ಯಾನ್ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್ ಬುಲ್ ನಾಯಿಗಳು ದಾಳಿ ಮಾಡಿದ ಘಟನೆ ಛತ್ತೀಸ್ಗಢದ ರಾಯ್ಪುರದ ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ನಡೆದಿದೆ.
ನಿನ್ನೆ ದೇಶದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ ಸಡಗರ, ಸಂಭ್ರಮದಿಂದ ನಡೆಯಿತು. ಈ ವೇಳೆ ಶೆಡ್ ಕುಸಿದು ಬಿದ್ದ ಘಟನೆ ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡ್ರೈವಿಂಗ್ ಮಾಡುತ್ತಾ, ಯುವತಿಗೆ ಕಿಸ್ ಮಾಡಿ, ರೊಮ್ಯಾನ್ಸ್ ಮಾಡುತ್ತಾ ಸಾಗಿದ ವಿಡಿಯೋ ವೈರಲ್ ಆಗಿದೆ. ನಾಗ್ಪುರದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ.
ಕಾಗೆ ಅಂಗಡಿ ಬಳಿ ದಿನ ಕಿರುಚುತ್ತಿದೆ ಎಂದು ಮಟನ್ ಅಂಗಡಿ ಮಾಲೀಕ ಅದನ್ನು ಹಿಡಿದುಕೊಂಡು ಅಂಗಡಿ ಬಳಿ ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ತತಿಪಾಕಾ ಮಾರುಕಟ್ಟೆಯಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಗುರುತಿಸಿಕೊಂಡಿದ್ದ ಅನ್ವಿ ಕಾಮ್ದಾರ್, ರೀಲ್ಸ್ ವಿಡಿಯೊ ಚಿತ್ರೀಕರಿಸಲು ಹೋಗಿ 300 ಅಡಿ ಆಳವಾದ ಕಮರಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯೊಬ್ಬಳು ಅಚಾನಕ್ಕಾಗಿ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮುಂಬೈಯ ದೋಂಬಿವಿಲ್ನ ವಿಕಾಸ್ ನಾಕಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.