ತುಮಕೂರು : 35 ನವಿಲುಗಳು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿದ ಘಟನೆ ತುಮಕೂರಿನ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನವಿಲುಗಳ ಸಾವುಗಳು ಸಂಭವಿಸಿದೆ.

ಬಿಸಿಲಿನ ತಾಪಮಾನ ಏರಿಕೆಯಿಂದ ಅಥವಾ ಹಕ್ಕಿ ಜ್ವರವೇ ಸಾವಿಗೆ ಕಾರಣವೆಂದು ಶಂಕಿಸಲಾಗಿದೆ. ಅರಣ್ಯ ಇಲಾಖೆ ಹಾಗೂ ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಮಯೂರಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿವೆ.

ಪ್ರಾಥಮಿಕ ವರದಿ ಹೇಳುವಂತೆ ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ಶಾಖ ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ಅರಣ್ಯ ಇಲಾಖೆ ತನಿಖೆ ಮುಂದುವರಿಸಿದೆ. ಮುಂದಿನ 48 ಗಂಟೆಗಳಲ್ಲಿ ಪ್ರಯೋಗಾಲಯದ ವರದಿ ಲಭ್ಯವಾಗಲಿದೆ.