Showing 20 of 85 posts • Page 4 of 5
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ.
ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್ನಲ್ಲಿ ಹುಳ ಪತ್ತೆಯಾಗಿದೆ.
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲ್ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪ್ರಪಂಚದ ಅತಿ ಎತ್ತರದ ಪರ್ವತ ಶ್ರೇಣಿಯಾದ ಹಿಮಾಲಯ ಪರ್ವತದ ಮೌಂಟ್ ಎವರೆಸ್ಟ್ ಶಿಖರವು ಸಮುದ್ರಮಟ್ಟದಿಂದ 8,849 ಮೀಟರ್ ಅಂದರೆ 29 ಸಾವಿರದ ಮೂವತ್ತೊಂದು ಅಡಿ ಎತ್ತರವಿದೆ.
ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ (ಜೂನ್ 26) ಬಂಧಿಸಿದ್ದಾರೆ.
ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ, ಬೆಂಕಿಯ ಮಧ್ಯೆ ಸಿಕ್ಕಿಹಾಕಿಕೊಂಡ ದನಗಳು ಪ್ರಾಣ ಕಳೆದುಕೊಂಡಿವೆ. ಎರಡು ಹಸುಗಳು ದಾರುಣವಾಗಿ ಮೃತಪಟ್ಟಿವೆ.
ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ ವ್ಯಕ್ತಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗೆ ಮನವಿ ಸಲ್ಲಿಸಿದರು.
ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ.
ನಗರದ ತಾಯಿ ಮಕ್ಕಳ ಆಸ್ಪತ್ರೆಯ ಬಳಿ ಪೊಲೀಸ್ ಅಧಿಕಾರಿಗಳಂತೆ ನಟಿಸಿ ವಂಚಕರು ಮಹಿಳೆಯೊಬ್ಬರ 1.50 ಲಕ್ಷ ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ.
ನಗರದಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ತಾಲ್ಲೂಕು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮದುಗಿರಿ ಡಿಡಿಪಿಐ ಹಾಗೂ ಕೊರಟಗೆರೆ ಶಿಕ್ಷಣ ಇಲಾಖೆ ವಿರುದ್ಧ ಪರಮೇಶ್ವರ್ ಕೋಪಗೊಂಡಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಶಿಕ್ಷಕರ ಬೇಜವಾಬ್ದಾರಿ ಕಾರಣ ಎಂದು ಪರಮೇಶ್ವರ್ ಕಿಡಿಕಾರಿದರು.
ನಗರದಲ್ಲಿ ಇಂದಿನಿಂದ ಪ್ರಾಯೋಗಿಕವಾಗಿ ಎರಡು ರೂಟ್ ಗಳಲ್ಲಿ ನಗರ ಸಾರಿಗೆ ಆರಂಭಿಸಿದ್ದು ಇದು ಯಶಸ್ವಿಯಾದರೆ ನಗರ ಸಾರಿಗೆ ಬಲಪಡಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಪರಿಸರ ಸಮತೋಲನ ಕಾಪಾಡಲು ಹೆಚ್ಚು ಸಸಿಗಳನ್ನು ನೆಡಬೇಕು. ಅವುಗಳನ್ನು ಪಾಲನೆ, ಪೋಷಣೆ ಮಾಡಿ ಗಿಡಗಳಾದ ಮೇಲೆ ಸಂರಕ್ಷಣೆ ಮಾಡಬೇಕು. ಆರೋಗ್ಯಯುತ ಜೀವನ ನಡೆಸಲು ಉಪಯುಕ್ತವಾಗುತ್ತದೆ ಎಂದು ಪಿಡಿಒ ಜುಂಜೇಗೌಡ ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟು ಬಿದ್ದು ಇನ್ನಿತರ ವಿದ್ಯಾರ್ಥಿಗಳು ಪಾರಾಗಿರುವ ಘಟನೆ ಶಿರಾ ನಗರದಲ್ಲಿ ಗುರುವಾರ ನಡೆದಿದೆ.
ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ತೂಗುದೀಪ್ ಬಂಧನವಾಗಿದೆ. ಖಾಕಿ ವಶದಲ್ಲಿರುವ ಇರುವ ದರ್ಶನ್ ಹಾಗು ಅವರ ಟೀಂ ಗೆ ಪೊಲೀಸರು ಬಿರಿಯಾನಿ ನೀಡಿದ್ದರು ಎಂದು ಹೇಳಲಾಗಿತ್ತು
ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ ಬೇಧಿಯಿಂದ ಅಸ್ವಸ್ಥಗೊಂಡವರಲ್ಲಿ ಇದೀಗ ಮತ್ತೆ ಎರಡು ಮಂದಿ ಸಾವನಪ್ಪಿದ್ದು ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.
ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಹಾಗೂ ಅವರ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ನಡೆದಿದೆ.