Showing 20 of 3348 posts • Page 1 of 168
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು.
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ ಅವಿನಾಶ್ ಕಾಮತ್ ತಿಳಿಸಿದರು.
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಟ್ರಸ್ಟಿ ಗೀತಾಂಜಲಿ ಎಂ. ಸುವರ್ಣ ತಿಳಿಸಿದರು.
ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು.
ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯ.
ಆಕಾಶದಲ್ಲಿ ಬುಧವಾರ ಮಧ್ಯಾಹ್ನ ಸೂರ್ಯನ ಸುತ್ತ ವೃತ್ತಾಕಾರದ ಬೆಳಕಿನ ವಲಯವೊಂದು ಕಾಣಿಸಿಕೊಂಡು ಸಾರ್ವಜನಿಕರ ಗಮನ ಸೆಳೆಯಿತು.
ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದೆ. ಕಳವಾದ ಬಸ್ ಅನ್ನು ಪೊಲೀಸರು ಮುದುರಂಗಡಿ ಸಮೀಪದ ಮುದ್ದಾಡಿ ಹಾಡಿಯಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲ್ಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ನಡೆದಿದೆ.
ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯ ಅಂಗಡಿಗಳಲ್ಲಿ ಬೆಳಕಿಗೆ ಆಕರ್ಷಿತಗೊಂಡು ಸಾವಿರಾರು ರೆಕ್ಕೆ ಹೊಂದಿರುವ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು.
ತುಳು ಭಾಷೆಗೆ ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಅ.4ರಂದು ನಗರದಲ್ಲಿ ‘ವಿಶೇಷ ತುಳುವೆರೆ ದಿಬ್ಬಣ’ ಹಾಗೂ ಗೌಜಿ-ಮಿನದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಗೆ ಸಂಬಂಧಿಸಿದಂತೆ ತೀವ್ರ ವಿವಾದಕ್ಕೆ ಕಾರಣರಾದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹ.
ಹನುಮಾನ್ ಗ್ಯಾರೇಜ್ಗೆ ತೆರಳುವ ರಸ್ತೆ ಹಾಗೂ ವಿಷನ್ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ತಿಂಗಳಿಂದ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ‘ನಂದಳಿಕೆ ಪಾಂಡು’ (23) ಹೆಸರಿನ ಕೋಣ ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ.
ಹೆತ್ತ ತಾಯಿಯನ್ನು ಮಗ ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರ ಸಿಟಿ ಸೆಂಟರ್ ಕಟ್ಟಡದಲ್ಲಿ ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ನ ನೂತನ ಬ್ರಹ್ಮಾವರ ಶಾಖೆ ಉದ್ಘಾಟನೆ.
ಕಾಪು ಪೆಟ್ರೋಲ್ ಬಂಕ್ ಸಮೀಪ ಖಾಸಗಿ ಎಕ್ಸ್ಪ್ರೆಸ್ ಬಸ್ ವೊಂದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಬಾಳೆಕುದ್ರು ಮಠದ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ವಿರುದ್ಧ ಮಠದ ಭಕ್ತರು ಹಾಗೂ ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸಿ, ಪೀಠತ್ಯಾಗ ಮಾಡುವಂತೆ ಒತ್ತಾಯಿಸಿ ಮಠದ ಬಳಿ ಪ್ರತಿಭಟನೆ ನಡೆಸಿದರು.