ಉಡುಪಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ಕನ್ಯಾಡಿಯಲ್ಲಿ ಬುಧವಾರ ನಡೆಯಿತು.
ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ಟ್ರಸ್ಟ್ ನ ಗೌರವಾಧ್ಯಕ್ಷರು, ಮಾಜಿ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ, ಹಿಂದೂ ಸಮಾಜದ ಬಗ್ಗೆ ಚಿಂತನೆ ಮಾಡುವ ಸ್ವಾಮೀಜಿ ಆಗಿದ್ದಾರೆ.
ವಿವಿಧ ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದಕ್ಕಾಗಿ ಅವರಿಗೆ ದಕ್ಷಣಿ ಭಾರತದ ಮಹಾಮಂಡಲೇಶ್ವರ ಪಟ್ಟವು ಲಭಿಸಿದೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣದ ಕಾಮಗಾರಿ ಆರಂಭಗೊಂಡಿದೆ.
ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ಯಶಸ್ವಿಯಾಗಿ ರಾಷ್ಟ್ರೀಯ ಧರ್ಮ ಸಂಸದ್ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದರು ಎಂದರು.

