ಉಡುಪಿ: ನಟ ರಾಜು ತಾಳಿಕೋಟೆ ಕೊನೆಯುಸಿರೆಳೆದಿದ್ದಾರೆ. ಮಣಿಪಾಲ ಆಸ್ಪತ್ರೆ ಮುಂದೆ ನಟ ಶೈನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಬಿಗ್ ಬಾಸ್ ಸೀಸನ್ 7ರಲ್ಲಿ ಜೊತೆಗಿದ್ದೆವು, ಇಡೀ ಸೀಸನ್ ನ ನಟರ ಜೊತೆ ಅನ್ಯೋನ್ಯ ಸಂಬಂಧವಿದೆ.  ತುಂಬಾ ತಮಾಷೆಯ ಬಹಳ ಪ್ರೀತಿಸುವ ವ್ಯಕ್ತಿ ಎಂದರು.

ಸಿನಿಮಾ ನಿರ್ಮಾಣದ ಕಾಲ ಕೂಡಿ ಬಂದಾಗ ರಾಜು ಅವರನ್ನು ಸಂಪರ್ಕ ಮಾಡಿದ್ದೆ, ನಮ್ಮ ಸಿನಿಮಾಕ್ಕೆ ಮೊದಲು ಆಯ್ಕೆ ಮಾಡಿದ್ದು ರಾಜು ತಾಳಿಕೋಟೆ ಅವರನ್ನು, ಪಾತ್ರ ಮತ್ತು ಡೈಲಾಗ್ ಅವರಿಗಾಗಿಯೇ ಬರೆದಿದ್ದೇವೆ,  ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿದ್ದೇವೆ ಎಂದರು.

ಉಡುಪಿ ಮಂಗಳೂರು ಸುತ್ತಾಡಲು ಮೀನು ತಿನ್ನಲು ಒಂದು ದಿನ ಮೊದಲೇ ಬಂದಿದ್ದರು. ಗೆಳೆಯರ ಜೊತೆ ಬೇರೆ ಬೇರೆ ಜಾಗಕ್ಕೆ ಸುತ್ತಾಡಿದ್ದಾರೆ, ಮೊನ್ನೆ ರಾತ್ರಿ 11 ಗಂಟೆಗೆ ತಂಡದ ಜೊತೆ ಮಾತನಾಡಿದ್ದಾರೆ, 11.59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದಾರೆ.  ಕೂಡಲೇ ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋದೆವು, ಅಲ್ಲಿಂದ ನೇರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬಂದೆವು

ಕಳೆದ ರಾತ್ರಿಯೇ ಕುಟುಂಬಕ್ಕೆ ಮಾಹಿತಿಯನ್ನು ಕೊಟ್ಟಿದ್ದೇವೆ ಎಂದರು. ಮಕ್ಕಳು ಕುಟುಂಬಸ್ಥರು ಬಂದಿದ್ದರು ಅವರು ಕೊನೆಯ ಉಸಿರೆಳೆದಿದ್ದಾರೆ. ರಾಜು ತಾಳಿಕೋಟೆಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದರು.