ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಅನಂತ್ ಅಂಬಾನಿ ಅವರು ಸೋಮವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರು ಅನಂತ್ ಅಂಬಾನಿ ಅವರಿಗೆ ಫಲ–ಮಂತ್ರಾಕ್ಷತೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಶೀರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಪಂಡಿತ್ ಚಂದ್ರಶೇಖರ ಶರ್ಮ, ಕರ್ನಾಟಕದ Reliance Jio ವ್ಯವಸ್ಥಾಪಕರಾದ ಧನಂಜಯ ಆರ್., ಶಿವನಂದನ ಯು.ಎಸ್., ಮಾಧವ ಶಾನುಭಾಗ್, ಜಯಪ್ರಕಾಶ್ ಶೆಟ್ಟಿ, ಉಮೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

