ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದ ಸಾಂಸ್ಕೃತಿಕ ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ ಎಂದರು.
ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದರು ಶಾಸಕರು ಕಾರ್ಯಕ್ರಮದಲ್ಲಿ ಇರಲಿದ್ದಾರೆ.

