ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ಸ್ ನಿಲ್ದಾಣ ಸಮೀಪದ ಭಾಗೀರಥಿ ಎಣ್ಣೆ ಮಿಲ್ ನಲ್ಲಿ ಸಂಜೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ.
ಪ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನ ಎಣ್ಣೆ ಮತ್ತು ಕೊಬ್ಬರಿಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲೆಗೆ ಪ್ಯಾಕ್ಟರಿಯಾ ಬಹುಭಾಗ ಸುಟ್ಟುಕರಕಲಾಗಿದೆ. ಉಡುಪಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಯಿತು.

