ಉಡುಪಿ: ವಂದೇ ಮಾತರಂಗೆ 150 ವರ್ಷ’ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ‘ವಂದೇ ಮಾತರಂ’ ಸಾಮೂಹಿಕ ಗೀತೆ ಗಾಯನ ನಡೆಯಿತು.

ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದರು.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಾಮೂಹಿಕ ಗಾಯನ ನಡೆಸಿದರು.

ತ್ರಿವರ್ಣ ಧ್ವಜ ಹಿಡಿದು ಒಂದೇ ಮಾತರಂ ಗೀತೆಯ ಪೂರ್ಣ ಪಾಠವನ್ನು ಹಾಡಿದರು. ಶಾಸಕ ಯಶ್ ಪಾಲ್ ಸುವರ್ಣ ಉಪಸ್ಥಿತರಿದ್ದರು .ಈ ಮೂಲಕ ವಂದೇ ಮಾತರಂಗೆ ಗೌರವ ಸಲ್ಲಿಸಿದರು.