ಉಡುಪಿ: ಕುಕ್ಕಿಕಟ್ಟೆಯಿಂದ ಮಂಚಿ ಹೋಗುವ ರಸ್ತೆಯ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದಾರೆ.
ಮೃತ ವ್ಯಕ್ತಿಯ ಹೆಸರು ವಿಳಾಸ ಹಾಗೂ ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತನ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಘಟನಾ ಸ್ಥಳದಲ್ಲಿದ್ದು, ಉಡುಪಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಡಿಗೇರಿ, ಪಿ.ಎಸ್.ಐ ಭರತೇಶ್, ಹೆಡ್ ಕಾನ್ಸಟೇಬಲ್ ಹರೀಶ್ ಮಾಳ ಮಹಜರು ಪ್ರಕ್ರಿಯೆ ನಡೆಸಿದರು. ಮೃತ ದೇಹದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದರಿಂದ, ಮಣಿಪಾಲ ಕೆ.ಎಂ.ಸಿ ಹಾಗೂ ಇಲಾಖೆಯ ವಿಧಿ ವಿಜ್ಞಾನ ತಜ್ಞರು ಪರೀಕ್ಷಾ ಪ್ರಕ್ರಿಯೆ ನಡೆಸಿದರು.

