ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾರ್ಕಳ ತಾಲ್ಲೂಕಿನ ಇದು ಗ್ರಾಮದಲ್ಲಿರುವ ಸೇತುವೆ ಮುಳುಗಡೆಯಾಗಿದ್ದು, ನೂರಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸೇತುವೆಯ ಮೇಲೆಯೇ ನೀರು ಹರಿಯುತ್ತಿದೆ. ಇದರಿಂದ ವಾಹನ ಹಾಗೂ ಸಾರ್ವಜನಿಕರ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳೀಯರು ಪರದಾಡುವಂತಾಗಿದೆ.

ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಮುಂದುವರಿದರೆ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ಹಾಗೂ ತಗ್ಗು ಪ್ರದೇಶಗಳ ಸಮೀಪ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.