ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಧೀಕೃತ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಮಣಿಪಾಲ ಎಂಜಿಸಿ ಮತಗಟ್ಟೆಯಲ್ಲಿ ಇಂದು ಮತದಾನ ಮಾಡಿದರು.

ಆಪ್ತ ಬೆಂಬಲಿಗರೊಂದಿಗೆ ಮತಗಟ್ಟೆ ಆಗಮಿಸಿದ ಅವರು ತಮ್ಮ ಮತ ಚಲಾಯಿಸಿದರು. ಬಿಜೆಪಿಯಿಂದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಅವರು ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಇನ್ನು : ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಅವರು ಸ್ಪರ್ಧಿಸುತ್ತಿದ್ದಾರೆ.