ಉಡುಪಿ: ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊ. ಶಂಕರ್ ಅಭಿನಂದನ ಕಾರ್ಯಕ್ರಮ ಇದೇ ಡಿಸೆಂಬರ್ 14ರ ಶನಿವಾರ ಮಧ್ಯಾಹ್ನ 3.30 ರಿಂದ 8.30ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ರವಿರಾಜ್ ಎಚ್.ಪಿ ತಿಳಿಸಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು 4ಗಂಟೆಗೆ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಯಕೃಷ್ಣ ಪರಿಸರ ಪ್ರೇಮಿ ಸಮಿತಿಯ ತೋನ್ಸೆ ಜಯಕೃಷ್ಣ ಶೆಟ್ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸಭಾಕಾರ್ಯಕ್ರಮಕ್ಕೂ ಮೊದಲು ಮಧ್ಯಾಹ್ನ 3.30 ರಿಂದ ವಿದುಷಿ ಮಂಜರಿಚಂದ್ರ ಅವರ ಶಿಷ್ಯರಿಂದ ‘ನೃತ್ಯ ಸಿಂಚನ’ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಸಂಜೆ 4:35ರಿಂದ ಪ್ರೊಫೆಸರ್ ಶಂಕರ್ ಅವರ ಜಾದೂ ಜಗತ್ತು ವಿಡಿಯೋ ತುಣುಕು ಅನಾವರಣಗೊಳ್ಳಲಿದೆ. ಸಂಜೆ 5ಕ್ಕೆ ಪ್ರೊಫೆಸರ್ ಶಂಕರ್ ಅವರ ಕುರಿತಾದ ರಾಮಕೃಷ್ಣ ಶಾಸ್ತ್ರಿ ಅವರು ರಚಿಸಿದ ಪುಸ್ತಕವನ್ನು ನಾಡೋಜ ಪ್ರೊ. ಕೆ. ಪಿ. ರಾವ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

ಸಂಜೆ 5:30ರಿಂದ ಪ್ರೊಫೆಸರ್ ಶಂಕರ್ ಅವರ ಬಗ್ಗೆ ತೇಜಸ್ವಿ ಶಂಕರ್ ಅವರು ಮಾತನಾಡಲಿದ್ದಾರೆ. ಸಂಜೆ 5:45ರಿಂದ ಪ್ರೊಫೆಸರ್ ಶಂಕರ್ ಅವರ ಒಡನಾಡಿಗಳಾದ ಡಾ. ಕಿರಣ್ ಆಚಾರ್ಯ, ಲಿಯಾಕತ್ ಅಲಿ, ಮೂರ್ತಿ ದೇರಾಜೆ, ರಾಜ ಯೋಗಿನಿ ಬಿ.ಕೆ. ಸೌರಭ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದರು.

ಸಂಜೆ 6.20ರಿಂದ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ವಿನಯ್ ಹೆಗಡೆ ಅವರು ‘ಗಾಳಿಯಲ್ಲಿ ಚಿತ್ತಾರ’ ಎನ್ನುವ ವಿನೂತನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುಪಡಿಸಲಿದ್ದಾರೆ. ಸಂಜೆ 7.10ಕ್ಕೆ ಪ್ರೊಫೆಸರ್ ಶಂಕರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಖ್ಯಾತ ವಾಗ್ಮಿ ಓಂ ಗಣೇಶ್ ಉಪ್ಪುಂದ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಭಿನಂದನ ಸಮಿತಿಯ ಅಧ್ಯಕ್ಷರಾದ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಕಾರ್ಯದರ್ಶಿ ಜನಾರ್ದನ ಕೊಡವೂರು, ಉಪಾಧ್ಯಕ್ಷ ಕೋಶಾಧಿಕಾರಿ ಪ್ರೊ. ಸದಾಶಿವ ರಾವ್ ಉಪಸ್ಥಿತರಿದ್ದರು.