ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ದ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣರ ಚಾರಿತ್ರ್ಯ ಹೀನ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಸಹ್ರಾಸರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದು ಶಾಸಕ ಯಶ್ ಪಾಸ್ವರ್ಡ್ ವಿರುದ್ಧ ತೀವ್ರ ಆಕ್ರೋಶ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಯಶ್ ಪಾಲ್ ಸುವರ್ಣರನ್ನು ರಾವಣನಂತೆ ಬಿಂಬಿಸಿ ಹಾಕಲಾದ ಪೋಸ್ಟರ್ ಎಲ್ಲರ ಗಮನ ಸೆಳೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಅಮೃತ್ ಶೆಣೈ, ಪ್ರಖ್ಯಾತ್ ಶೆಣೈ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

View this post on Instagram

A post shared by News Karnataka (@newskarnataka)