ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಬುಧವಾರ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.

ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.

ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.

ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

View this post on Instagram

A post shared by News Karnataka (@newskarnataka)