ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಮಾಜಘಾತುಕ‌ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್‌ ಸಾಹೇಬ್ ಎಂಬುವರ ವಿರುದ್ದ ಗಡಿಪಾರು ಆದೇಶ ಹೊರಡಿಸಲಾಗಿದೆ. ವಿಜೇತ್ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಪಿತ್ತೋಡಿ ನಿವಾಸಿಯಾಗಿದ್ದು. ಈತನ ಮೇಲೆ 4 ಕೊಲೆ ಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿವೆ. ಈತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗಡಿಪಾರು ಮಾಡಲಾಗಿದೆ.

ಆರೀಫ್‌ ಸಾಹೇಬ್ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಮುದರಂಗಡಿ ನಿವಾಸಿಯಾಗಿದ್ದು. ಈತನ ಮೇಲೆ 5 ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆಯ ಪ್ರಕರಣಗಳಿದ್ದು, ಈತನ ಹೆಸರಿನಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಗಡಿಪಾರು ಮಾಡಲಾಗಿದೆ.

View this post on Instagram

A post shared by News Karnataka (@newskarnataka)