ಶಿರ್ವ: ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್(55)ಅಲ್ಪ ಕಾಲದ ಅನಾರೋಗ್ಯದಿಂದ ಮಾ.7 ರಂದು ರಾತ್ರಿ ನಿಧನ ಹೊಂದಿದರು.

ಕಳೆದ 8 ವರ್ಷಗಳಿಂದ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 5 ವರ್ಷ ಗಳಿಂದ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.