ಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೋಟ ಶ್ರೀನಿವಾಸ ಪೂಜಾರಿಯವರ ಫೋಟೋ ಬಳಸಿಕೊಂಡು ದುಷ್ಕರ್ಮಿಗಳು ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ನಕಲಿ ಖಾತೆ ತೆರೆದಿದ್ದಾರೆ.

ಈ ಮೂಲಕ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸಂಸದರ ಗಮನಕ್ಕೆ ಬಂದಿದ್ದು, ಅವರ ವಕೀಲ ಶ್ಯಾಮಸುಂದರ್ ನಾಯರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಸದರ ಹೆಸರನ್ನು ಕೆಡಿಸುವ ಉದ್ದೇಶದಿಂದ ಈ ರೀತಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.