ಉಡುಪಿ: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಬಾರ್ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜು.15ರ ಸೋಮವಾರ ಮುಂಜಾನೆ ನಡೆದಿದೆ.
ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.

