ಉಡುಪಿ: ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಡಿಕೆಶಿ ಹೇಳಿಕೆ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಅವರು ಬಹಳಷ್ಟು ಕೇರಳಕ್ಕೆ ಹೋಗುತ್ತಿದ್ದಾರೆ. ಅವರು ಜ್ಯೋತಿಷ್ಯ ಕಲಿಯುತ್ತಿದ್ದಾರೆ ಅನಿಸುತ್ತೆ, ಅವರು ಜ್ಯೋತಿಷ್ಯ ಹೇಳಲು ಪ್ರಾರಂಭಿಸಿದ್ದಾರೆ. ತನ್ನನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಗೊತ್ತಾಗಿದೆ. ಆದಷ್ಟು ಬೇಗ ಜ್ಯೋತಿಷ್ಯ ಕಾರ್ಯಾಲಯ ತೆರೆಯುವ ಅಂದಾಜು ಇದೆ ಎಂದರು.