ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎಪ್ರಿಲ್ 1ರಂದು ಬೆಳಿಗ್ಗೆ 10ರಿಂದ 5ಗಂಟೆಯವರೆಗೆ ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯಕೊಡವೂರು ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲು ಕರೆ ಮಾಡಿ ನೋಂದಣಿ ಮಾಡಿಕೊಳ್ಳುವ 30 ಮಂದಿಗೆ ಸೌಲಭ್ಯ ಸಿಗಲಿದೆ. ಹಿರಿಯರಿಗೆ ಮೊದಲ ಆದ್ಯತೆ ಇರಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಭಾರತಿ ಚಂದ್ರಶೇಖರ, ರಾಜೇಂದ್ರ ಪಂದುಬೆಟ್ಟು ಇದ್ದರು.

