ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಬಂಗಾರದ ಕವಚವನ್ನು ಸೇವಾ ರೂಪದಲ್ಲಿ ನೀಡುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಸ್ವರ್ಣ ಕವಚವನ್ನು ನಿರ್ಮಾಣ ಮಾಡಿದ್ದು, ಪ್ರಮೋದ್ ಮಧ್ವರಾಜ್ ಮನೆಗೆ  ಬರಮಾಡಿಕೊಳ್ಳಲಾಯಿತು. ಗೋಶಾಲೆಯಲ್ಲಿ ಕುರುಬ ಸಮುದಾಯ ಮತ್ತು ಹಾಲುಮತ ಪಂಗಡದವರ ಸಮ್ಮುಖದಲ್ಲಿ ಸ್ವರ್ಣ ಕವಚಕ್ಕೆ ವಿಶೇಷ ಪೂಜೆ ನೆರವೇರಿಸಲಾಯಿತು.

ಕನಕನ ಕಿಂಡಿಗೆ ಬಂಗಾರದ ಕವಚವನ್ನು ಅಳವಡಿಕೆ ಮಾಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅದನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಪರ್ಯಾಯ ಮಠಾದೇಶ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.