ಉಡುಪಿ: ಜಿಲ್ಲೆಯಾದ್ಯಂತ ಮುಂಜಾನೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ಈ ಮುಂಚೆ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿತ್ತು. ಆದರಂತೆ ಮುಂಜಾನೆ ಸಮಯದಲ್ಲಿ ಭಾರೀ ಮಳೆಯಾಗಿದೆ.

ಗುಡುಗು ಮಿಂಚುಸಹಿತ ಸುಮಾರು ಒಂದು ತಾಸು ಮಳೆಯಾಗಿ ತಂಪಿನ ವಾತಾವರಣವನ್ನು ಸೃಷ್ಟಿಸಿದೆ. ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು ಎಪ್ರಿಲ್ 11 ಮತ್ತು 12 ರಂದು ಭಾರತೀಯ ಹವಾಮಾನ ಇಲಾಖೆಯು ‘ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಗುರುವಾರ ಉಡುಪಿ ಜಿಲ್ಲೆಯಾದ್ಯಂತ ಬೆಳಗ್ಗೆ ಸಂಜೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಉರಿ ಸೆಕೆ ಹೆಚ್ಚು ಇತ್ತು. 33.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿತ್ತು. ಕನಿಷ್ಠ ತಾಪಮಾನ 22.5 ಡಿ.ಸೆ. ದಾಖಲಾಗಿತ್ತು.