ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ಬಾಳೆಕುದ್ರು ಮಠಕ್ಕೆ ಬೀಗ ಹಾಕಿ ಶ್ರೀಗಳು ನಾಪತ್ತೆಯಾಗಿದ್ದಾರೆ ಎನ್ನಲಾದ ಪ್ರಕರಣ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಮಠದ ಆಡಳಿತಾಧಿಕಾರಿ ಅನಿಲ್ ಕುಮಾರ್ ಮಧ್ಯಸ್ಥ ಅವರು ಪ್ರಕರಣದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮಠದಲ್ಲಿ ನಡೆದಿರುವ ಬೆಳವಣಿಗೆಗಳು, ಶ್ರೀಗಳ ನಾಪತ್ತೆ ಕುರಿತ ವಿಚಾರ ಹಾಗೂ ಮಠದ ಆಡಳಿತದ ಬಗ್ಗೆ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

