ಉಡುಪಿ :ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31 (ಬುಧವಾರ) ರಂದು ರಜೆ ಘೋಷಿಸಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಾಲ್ಕು ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

