ಉಡುಪಿ: ಮಾಸ್ಕ್ ಮ್ಯಾನ್ ಬಂಧನವನ್ನು ಗೃಹ ಸಚಿವ ಪರಮೇಶ್ವರ್ ಖಚಿತಪಡಿಸಿದರು. ಬಂಧನ ಆಗಿರುವುದು ನಿಜ. ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.
ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿ ಅದರಿಂದ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು. ಎಸ್ ಐ ಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ ಎಂದರು.
ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ. ಯಾವುದನ್ನು ಕೂಡ ಈಗ ಭೈರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅನೇಕ ಆರೋಪಳನ್ನು ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು ಎಂದರು.
ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ. 2023ರಲ್ಲಿ ಪೂಂಜ ನೀಡಿರುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಅವರು ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ತಡೆಯಾಜ್ಞೆ ತೆರವಾದರೆ ಕ್ರಮ ತೆಗೆದುಕೊಳ್ಳಬಹುದು.
ಯಾವ ಸೆಕ್ಷನ್ ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರು ದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು, ಎಸ್ ಐ ಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ. ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಹೇಳಬಲ್ಲೆ ಎಂದರು.

