ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ
ಗಾಯಗೊಂಡವರನ್ನು ತೀರ್ಥಹಳ್ಳಿಯ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಬುಧವಾರ ಆಸ್ಪತ್ರೆಯ ನಾಲ್ಕನೇ ಮಹಡಿಯ ಕಿಟಕಿಯ ಮೂಲಕ ಹೊರಗೆ ಬರಲು ಯತ್ನಿಸಿದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ದೃಶ್ಯಾವಳಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

View this post on Instagram

A post shared by News Karnataka (@newskarnataka)