ಉಡುಪಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಎರಡೂ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ.

