ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವಿನಾಯಕ ಚೌತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಕ್ಷೇತ್ರದ ತಂತ್ರಿಗಳ ಪೌರೋಹಿತ್ಯದಲ್ಲಿ ಬೆಳಿಗ್ಗೆ ಗಣಹೋಮ, ಪೂರ್ಣಾಹುತಿ ನಡೆಯಿತು. ರಾತ್ರಿ ಶ್ರೀದೇವರಿಗೆ ರಂಗಪೂಜೆ ನೆರವೇರಿತು. ಊರು ಹಾಗೂ ಪರವೂರಿನ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ಹಾಗೂ ಮಹಾಗಣಪತಿ ದೇವರ ಪೂರ್ಣಾನುಗ್ರಹಕ್ಕೆ ಪಾತ್ರರಾದರು.