ಉಡುಪಿ: ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ನಾರಾಯಣಗುರು ಆಡಿಟೋರಿಯಂನಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 1ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಬಳಿಕ ಗುರು ಸಂದೇಶ ಸಾಮರಸ್ಯ ಜಾಥಾಕ್ಕೆ ಚಾಲನೆ ನೀಡಲಾಗುವುದು ಎಂದರು.
ಬನ್ನಂಜೆ ಬಿಲ್ಲವರ ಸೇವಾ ಸಂಘದಿಂದ ಆರಂಭಗೊಳ್ಳುವ ಜಾಥಾವು ಎಸ್ಪಿ ಕಚೇರಿ ರಸ್ತೆ, ಅಂಬಲಪಾಡಿ ಜಂಕ್ಷನ್, ಕಿನ್ನಿಮೂಲ್ಕಿ, ಬಲಾಯಿಪಾದೆ, ಉದ್ಯಾವರ, ಕಟಪಾಡಿ, ಕಾಪು, ಮೂಳೂರು, ಉಚ್ಚಿಲ, ಪಡುಬಿದ್ರಿ ಹಾಗೂ ಹೆಜಮಾಡಿ ಮಾರ್ಗವಾಗಿ ಸಾಗಲಿದೆ. ಬಳಿಕ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಜಾಥಾ ಸಮಾಪ್ತಿಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ದಿವಾಕರ ಸನಿಲ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್, ವಿಜಯ ಕೋಟ್ಯಾನ್, ಗೌರವ ಸಲಹೆ ಸುಧಾಕರ್ ಡಿ. ಅಮೀನ್, ಇದ್ದರು.

