ಉಡುಪಿ: ನಟೋರಿಯಸ್ ರೌಡಿ ಇಸಾಕ್ ಚೇಸಿಂಗ್ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೆಲಮಂಗಲ ಪೊಲೀಸರ ಕಾರ್ಯಾಚರಣೆ ವೇಳೆ ಸರಣಿ ಅಪಘಾತ ನಡೆದಿದೆ. ತನ್ನ ಥಾರ್ ನಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಗುದ್ದಿ, ಎಸ್ಕೇಪ್ ಆಗಲು ಯತ್ನಿಸಿದ್ದಾರೆ.

ಚೇಸಿಂಗ್ ವೇಳೆ ನಾಲ್ಕು ಕಾರುಗಳಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಎರಡು ಪೊಲೀಸ್ ವಾಹನಗಳು ಜಖಂ ಆಗಿದೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಡಿಸಿ ಕಚೇರಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸಿನಿಮೀಯ ಶೈಲಿಯಲ್ಲಿ ಪೊಲೀಸರು ಚೇಸಿಂಗ್ ನಡೆಸಿದ್ದಾರೆ.