ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಕಾರೊಂದು ಫುಟ್‌ಪಾತ್‌ಗೆ ಡಿಕ್ಕಿ ಹೊಡೆದ ಘಟನೆ ನಗರದ ಜಿಲ್ಲಾ ನ್ಯಾಯಾಲಯದ (ಕೋರ್ಟ್) ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯ ಸೂಚನಾ ಫಲಕ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

View this post on Instagram

A post shared by News Karnataka (@newskarnataka)