ಉಡುಪಿ: ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪಾಜೆರೋ ಕಾರಿಗೆ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಬೈಕ್‌ ಸವಾರನೊಬ್ಬ ಆಕಸ್ಮಿಕವಾಗಿ ಅಡ್ಡ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಪರಿಣಾಮ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

View this post on Instagram

A post shared by News Karnataka (@newskarnataka)