ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್ಪ್ರೆಸ್ ಬಸ್ವೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಸೋಮವಾರ ಬೆಳಿಗ್ಗೆ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬಸ್ ಡಿವೈಡರ್ ಮೇಲೆ ಸಿಲುಕಿಕೊಂಡ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ನಾಗರಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಾಗಿತ್ತು.
ನಾಗರಪಂಚಮಿ ಹಿನ್ನೆಲೆಯಲ್ಲಿ ನಾಗಬನ ಹಾಗೂ ಮೂಲಸ್ಥಾನಗಳಿಗೆ ತೆರಳುತ್ತಿದ್ದ ಭಕ್ತರು ಸೇರಿದಂತೆ ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ತೊಂದರೆ ಅನುಭವಿಸಿದರು. ಸ್ಥಳದಲ್ಲಿ ವಾಹನಗಳ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಕ್ರಮ ಕೈಗೊಂಡರು.

