ಉಡುಪಿ : ಖಚಿತ ಮಾಹಿತಿ ಮೇರೆಗೆ ಮಣಿಪಾಲದ ದಶರಥನಗರದಲ್ಲಿರುವ ಡಿ . ಕ್ಲಾಸಿಕೊ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಕೊಠಡಿ ಸಂಖ್ಯೆ 104 ರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ .

ಚುಮನ್‌ರಾಮ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಒಬ್ಬ ಮಹಿಳೆಯನ್ನು ವೇಶ್ಯಾವಾಟಿಕೆಗೆ ದೂಡಲಾಗಿದೆ ಎಂದು ಆರೋಪದಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಈ ದಂಧೆಯ ಹಿಂದಿನ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.