ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಬಂಧಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು, ಮುಡಾ ಭೂ ಹಗರಣ, ವಾಲ್ಮೀಕಿ ನಿಗಮ ಹಗರಣ ಮುಂತಾದ ಹಗರಣದ ಸರಮಾಲೆಯನ್ನು ಹೊತ್ತಿರುವ ಲೂಟಿಕೋರ ರಾಜ್ಯ ಕಾಂಗ್ರೆಸ್ ಸರಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆಯನ್ನು ಸಲ್ಲಿಸಬೇಕು. ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪೆರಣಂಕಿಲ ಶ್ರೀಶ ನಾಯಕ್, ಕಿರಣ್ ಕುಮಾರ್ ಬೈಲೂರು,

ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮೊದಲಾದವರು ಉಪಸ್ಥಿತರಿದ್ದರು.