ಉಡುಪಿ: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ದಕ್ಷಿಣ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಗರದ ಜೋಡುಕಟ್ಟೆಯ ಬಳಿ ಪ್ರತಿಭಟನೆ ನಡೆಸಿ ಬಳಿಕ ರಸ್ತೆತಡೆ ನಡೆಸಲಾಯಿತು.

ದಕ್ಷಿಣ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಅನಂತರ ಹಿಂದೂಗಳ ಮನೆಗೆ ಕಲ್ಲೆಸುವುದು ಸಹಿತ ಇತರ ಹಲವಾರು ಘಟನೆಗಳು ನಡೆಯುತ್ತಿವೆ. ಟಿಪ್ಪು ಸಂತಾನದವರು ಮಸೀದಿ ಎದುರು ಮೆರವಣಿಗೆ ಹೋಗುತ್ತಿದ್ದವರಿಗೆ ಕಲ್ಲು ತೂರಾಟ ‌ ಮಾಡುತ್ತಾರೆ.

ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ನಿರಂತರವಾಗಿ ಈ ರೀತಿಯ ಆಕ್ರಮಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ಅಲ್ಪಸಂಖ್ಯಾತರ ಒಲೈಕೆ ರಾಜಕಾರಣವೇ ಪ್ರಮುಖ ಕಾರಣ. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ರಾಜೇಶ್ ಉಚ್ಚಿಲ, ಮಹೇಶ್ ಬೈಲೂರು, ಅಜಿತ್ ಕೊಡವೂರು, ಉಮೇಶ್ ಸೂಡ, ಉಮೇಶ್ ಪಕ್ಕಾಲು, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ, ರವೀಂದ್ರ ಶೆಟ್ಟಿ ಕೊಲ್ಯಬೆಟ್ಟು, ಶ್ರೀಕಾಂತ್ ನಾಯಕ್ ಅಲೆವೂರು, ಜಿತೇಂದ್ರ ಶೆಟ್ಟಿ, ವೀಣಾ ಶೆಟ್ಟಿ ನೀತಾ ಪ್ರಭು, ಪ್ರಜ್ಞಾಶೆಟ್ಟಿ ಚಂದ್ರಕಲಾ ಉಪಸ್ಥಿತರಿದ್ದರು.