ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ ಪುರಸ್ಕಾರ- 2025ಕ್ಕೆ ಸಾಮಾಜಿಕ ಹೋರಾಟಗಾರ, ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ.ಭಂಡಾರಿ ಅವರು ಆಯ್ಕೆಯಾಗಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಅವರು, ಸೆ. 24ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಪಿ.ವಿ. ಭಂಡಾರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಸಂಗೊಳ್ಳಿ ರಾಯಣ್ಣ ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಪ್ರಸನ್ನ ಹಿರೇಮಠ್ ಉಪಸ್ಥಿತರಿದ್ದರು.

